ಆಡಿನ ಶಿರದಮೇಲೆ ಕುಣಿದಾಡುವ ಕೋಡಗ ಮಾರುತನ ಕೂಡೆ ಉಡುವ ಹಡೆಯಿತ್ತು ನೋಡಾ. ಉಡುವಿನ ನಾಲಗೆಯಲ್ಲಿ ಅಜ ಹರಿ ಸುರ ಮನು ಮುನಿಗಳು ಅಡಗಿದರು. ಇವರೆಲ್ಲರ ಯಜನಾದಿಕೃತ್ಯಂಗಳು ಉಡುವಿನ ಕಾಲಿನಲ್ಲಿ ಅಡಗಿದವು. ತ್ರಿಜಗವೆಲ್ಲವು ಹೀಂಗೆ ಪ್ರಳಯದಲ್ಲಿ ಮುಳುಗಿದೆಯಲ್ಲ. ಉಡುವಿನ ನಾಲಗೆ ಕೊಯಿದು
ಕುಣಿದಾಡುವ ಕೋಡಗನ ಕಾಲಮುರಿದು
ಅಜಪಶುವ ಕೊಂದು
ಅಗ್ನಿಯಲ್ಲಿ ಸುಟ್ಟು ಭಸ್ಮವಮಾಡಬಲ್ಲಾತನ ಜನನಮರಣ ವಿರಹಿತನೆಂಬೆ
ತ್ರಿಜಗಾಧಿಪತಿಗಳಿಗೆ ಒಡೆಯನೆಂಬೆ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.