ಆತ್ಮನೆಂಬ ಹುತ್ತಿನೊಳಗೆ ನಿದ್ರೆಯೆಂಬ ಕಾಳೋರಗನಟ್ಟಿ ಕಚ್ಚೆ
ಅಂಜನಸಿದ್ಧರ [ಅಂಜನ]ಹೋಯಿತ್ತು. ಘುಟಿಕಾಸಿದ್ಧರ ಘುಟಿಕೆಯುರುಳಿ ಬಿದ್ದಿತ್ತು. ಮಂತ್ರಸಿದ್ಧರ ಮಂತ್ರ ಮರೆದು ಹೋದವು. ಇದರ ವಿಷವ ಪರಿಹ [ರಿಸಿದವರ ಕಾ]ಣೆ. ಈ ರಾಹುವಿನ ವಿಷದಿಂದ ಮೂರು ಲೋಕದವರೆಲ್ಲರೂ ಮೂರ್ಛಾಗತವಾದುದ ಕಂಡು ನಾನು ಪರಮಭಕುತಿಭಿಕ್ಷೆಯನುಂಡು ಮಂಡೆ ಬೋಳಾದೆನು ಕಾಣಾ ಗುಹೇಶ್ವರಾ.