ಆದಿಯಲ್ಲಿ ಬಸವಣ್ಣನುತ್ಪತ್ಯವಾದ ಕಾರಣ

ವಿಕಿಸೋರ್ಸ್ದಿಂದ



Pages   (key to Page Status)   


ಆದಿಯಲ್ಲಿ ಬಸವಣ್ಣನುತ್ಪತ್ಯವಾದ ಕಾರಣ ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಮತ್ರ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಗುಹೇಶ್ವರಾ ನಿಮ್ಮಾಣೆ
ಎನಗೆಯೂ ನಿನಗೆಯೂ ಬಸವಣ್ಣನ ಪ್ರಸಾದ.