ಉಂಬಲ್ಲಿ [ಊ]ಡುವಲ್ಲಿ ಕ್ರೀಯಳಿಯಿತ್ತೆಂಬರು ಕೊಂಬಲ್ಲಿ ಕೊಡುವಲ್ಲಿ ಕುಲವನರಸುವರು ಎಂತಯ್ಯಾ ಅವರ ಭಕ್ತರೆಂತೆಂಬೆ ಎಂತಯ್ಯಾ ಅವರ ಯುಕ್ತರೆಂತೆಂಬೆ ಕೂಡಲಸಂಗಮದೇವಾ ಕೇಳಯ್ಯಾ ಹೊಲತಿ ಶುದ್ಧ ನೀರ ಮಿಂದಂತಾಯಿತ್ತಯ್ಯಾ.