ಉಲಿವ ತರುವಲಿಗಳೆಲ್ಲ ಗಿಳಿವಿಂಡುಗೆಡೆದಿಹರು ಅರಿಯದ ಮೌನಿಯ ಮುಕ್ತಿಯಿದೇನೊ ? ಅರಿದಡೇನು ಅರಿಯದಿದ್ದಡೇನು ತನ್ನಲ್ಲಿದ್ದ ವಸ್ತುವ ತಾನರಿಯದನ್ನಕ್ಕ ? ಅಂಗದಲ್ಲಿ ಒದಗಿದ ಲಿಂಗವನರಿಯದೆ ಭಂಗಬಟ್ಟರು ಕಾಣಾ ಗುಹೇಶ್ವರಾ.