ವಿಷಯಕ್ಕೆ ಹೋಗು

ಎಂಟುಲಕ್ಷದ ಮೇಲೆ ಐನೂರು

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎಂಟುಲಕ್ಷದ ಮೇಲೆ ಐನೂರು ದೇವರಿಗೆ ಮಾಡಿದ ಬೋನವ ಒಬ್ಬ ಜಂಗಮನಾರೋಗಣೆಯ ಮಾಡುವನಲ್ಲದೆ
ಹದಿನಾರು ಲಕ್ಷದ ಮೇಲೆ ಐನೂರು ದೇವರು ಕೂಡಿಕೊಂಡು ಒಬ್ಬ ಜಂಗಮಕ್ಕೆ ಮಾಡಿದ ಬೋನವನಾರೋಗಿಸಲರಿಯವು. ಅಂತಪ್ಪ ದೇವರಿಗಿಂತಲೂ ಜಂಗಮವೆ ಘನ. ಕೃತಯುಗದಲ್ಲಿ ಸುವರ್ಣದ ಲಿಂಗಾವಾದಲ್ಲಿ ನಿನ್ನ ಹೆಸರೇನು ? ತ್ರೇತಾಯುಗದಲ್ಲಿ ಬೆಳ್ಳಿಯ ಲಿಂಗವಾದಲ್ಲಿ ನಿನ್ನ ತಾಯಿ-ತಂದೆ ಯಾರು ? ದ್ವಾಪರದಲ್ಲಿ ತಾಮ್ರದಲಿಂಗವಾದಲ್ಲಿ ಹದಿನೆಂಟು ಜಾತಿಯ ಕೈಯ ಕಿಲುಬು ಹೋಯಿತ್ತು. ಕಲಿಯುಗದಲ್ಲಿ ಕಲ್ಲ ದೇವರಾದರೆ ಇಕ್ಕಿದೋಗರವನುಣ್ಣದೇಕೊ ? ಹಿಂದೊಮ್ಮೆ ನಾಲ್ಕುಯುಗದಲ್ಲಿ ಅಳಿದು ಹೋದುದನರಿಯಾ ? ಇನ್ನೇಕೆ ದೇವತನಕ್ಕೆ ಬೆರತಹೆ ? ``ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ _ಇದು ಕಾರಣ ಕೂಡಲಚೆನ್ನಸಂಗಯ್ಯಾ
ತಪ್ಪದೆ ನಾಲ್ಕುಯುಗದಲ್ಲಿ ಜಂಗಮವೆ ಪ್ರಾಣಲಿಂಗವಾದ ಕಾರಣ ಸ್ಥಾವರವೆ ಜಂಗಮಪ್ರಸಾದಕ್ಕೆ ಯೋಗ್ಯವಾಯಿತ್ತು.