ಎನ್ನ ತನುವೆ ಚನ್ನಬಸವಣ್ಣನಯ್ಯಾ ಎನ್ನ ಮನವೆ ಮಡಿವಾಳನಯ್ಯಾ ಎನ್ನ ಪ್ರಾಣವೆ ಸಂಗನಬಸವಣ್ಣನಯ್ಯಾ ಗುಹೇಶ್ವರಾ_ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ ಕಂಡು ಪರಮಸುಖಿಯಾಗಿರ್ದೆನು.