ಎನ್ನಂತರಂಗದೊಳಗೆ ಅರಿವಾಗಿ

ವಿಕಿಸೋರ್ಸ್ದಿಂದ


Pages   (key to Page Status)   

ಎನ್ನಂತರಂಗದೊಳಗೆ ಅರಿವಾಗಿ
ಎನ್ನ ಬಹಿರಂಗದೊಳಗೆ ಆಚಾರವಾಗಿ ನೀನೆಡೆಗೊಂಡು
ಎನ್ನ ಮನದೊಳಗೆ ಘನ ನೆನಹಾಗಿ ಮೂರ್ತಿಗೊಂಡು
ಗುರುಸ್ಥಲ ಲಿಂಗಸ್ಥಲ ಜಂಗಮಸ್ಥಲ ಪ್ರಸಾದಿಸ್ಥಲವೆಂಬ ಚತುರ್ವಿಧವನೂ ಎನಗೆ ಸ್ವಾಯತವ ಮಾಡಿ ತೋರಿ
ಪ್ರಾಣಲಿಂಗವೆಂಬ ಹಾದಿಯ ಸೆರಗ ತೋರಿಸಿ
ಎಲ್ಲಾ ಅಸಂಖ್ಯಾತರನೂ ಪಾವನವ ಮಾಡಿದಿರಾಗಿ- ಕೂಡಲಸಂಗಮದೇವಾ
ನಿಮ್ಮಿಂದ ಸಕಲ ಸನುಮತವ ನಾನರಿದೆನಲ್ಲದೆ
ಎನ್ನಿಂದ ನೀನಾದೆ ಎಂಬುದ ನಿಮ್ಮ ಪ್ರಮಥರು ಮೆಚ್ಚರು ನೋಡಯ್ಯಾ.