ಎನ್ನವರೊಲಿದು ಹೊನ್ನ ಶೂಲದಲ್ಲಿಕ್ಕಿದರೆನ್ನ ಹೊಗಳಿ ಹೊಗಳಿ ಎನ್ನ ಹೊಗಳತೆ ಎನ್ನನಿಮ್ಮೈಗೊಂಡಿತ್ತಲ್ಲಾ- ಅಯ್ಯೋ ನೊಂದೆನು ಸೈರಿಸಲಾರೆನು ! ಅಯ್ಯಾ ನಿಮ್ಮ ಮನ್ನಣೆಯೆ ಮಸೆದಲಗಾಗಿ ತಾಗಿತ್ತಲ್ಲಾ- ಅಯ್ಯೋ ನೊಂದೆನು ಸೈರಿಸಲಾರೆನು. ಕೂಡಲಸಂಗಮದೇವಾ ನೀನೆನಗೆ ಒಳ್ಳಿದನಾದಡೆ ಎನ್ನ ಹೊಗಳತೆಗಡ್ಡ ಬಾರಾ ಧರ್ಮೀ !