ಎಮ್ಮವರಿಗೆ ಸಾವಿಲ್ಲ ಎಮ್ಮವರು ಸಾವನರಿಯರು ಸಾವೆಂಬುದು ಸಯವಲ್ಲ. ಲಿಂಗದಲ್ಲಿ ಉದಯವಾದ ನಿಜೈಕ್ಯರಿಗೆ ಆ ಲಿಂಗದಲ್ಲಿಯಲ್ಲದೆ ಬೇರೆ ಮತ್ತೊಂದೆಡೆಯಿಲ್ಲ. ಕೂಡಲಸಂಗಮದೇವರ ಶರಣ ಸೊಡ್ಡಳ ಬಾಚರಸರು ನಿಜಲಿಂಗದ ಒಡಲೊಳಗೆ ಬಗಿದು ಹೊಕ್ಕಡೆ ಉಪಮಿಸಬಲ್ಲವರ ಕಾಣೆನು.