ಎಲ್ಲಿ ಹೊಕ್ಕಲ್ಲಿ ನಿನ್ನ ವಿಕಾರವ ಬಿಡೆ ಮಾಣೆ ಗರುವತನವೆ ದಾಸನ ವಸ್ತ್ರವ ಸೀಳುವುದೊಂದು ಗರುವತನವೆ ಸಿರಿಯಾಳನ ಮಗನ ಬೇಡುವುದೊಂದು ಗರುವತನವೆ ಬಲ್ಲಾಳನ ವಧುವ ಬೇಡುವುದೊಂದು ಗರುವತನವೆ ಕೋಡಗವ ಹುಲ್ಲಲಿ ಮುಸುಕಿದಂತೆ ಕೂಡಲಸಂಗಮದೇವಾ ನಿನ್ನ ಪರಿ.