ಏಳು ಕಮಲದ ಮೇಲೆ ಎಲೆಯಿಲ್ಲದ ವೃಕ್ಷದಲ್ಲಿ ಫಲವಿಲ್ಲದ ಹಣ್ಣಿನ ರುಚಿಯ ತಲೆಯೆ ಬಾಯಾಗುಣಬಲ್ಲರೆ ನೆಲ ಬೆಂದಿತ್ತು ತಲೆ ಸತ್ತಿತ್ತು. ಇದರ ಹೊಲಬ ಬಲ್ಲಾತನೇ ಪರಶಿವಯೋಗಿ ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.