ಒಡಲೊಳಗಿದ್ದು ಒಡಲಿಂಗಾಧಾರವಾಗಿ ಒಡಲ ಸೋಂಕದೆ ಒಡಲ ಬೆಳಗುವ ಪರಿಯ ನೋಡಾ ! ಬೆಳಗಿಂಗೆ ಬೆಳಗಾಗಿ ಬೆಳಗುವ ಪರಿಯ ನೋಡಾ ! ಪರಮಚೈತನ್ಯ ನಿರಾಳ ಗುಹೇಶ್ವರಲಿಂಗವ ನೋಡಾ !