ಒಮ್ಮೆ ನೆಲದಲ್ಲಿ ಬಿತ್ತಿದ ಬಿತ್ತುವ ಕಿತ್ತಿ ಕಿತ್ತಿ ಮತ್ತೆ ಬಿತ್ತುತ್ತ ಹೋದಡೆ
ಆ ಬಿತ್ತು ಮೊಳೆತು ಕಳೆಯೇರಿ ಬೆಳೆದು ಬೆಳಸನೀವ ಪರಿಯಿನ್ನೆಂತೊ
ಮರುಳು ಮಾನವಾ ? ಗುರುವಿತ್ತ ಲಿಂಗವ ತೊರೆ ತೊರೆದು ಮರಳಿ ಮರಳಿ ಧರಿಸಿದಡೆ ಆ ಇಷ್ಟಲಿಂಗವು ಅನಿಷ್ಟವ ಕಳೆದು ಇಷ್ಟಾರ್ಥವನೀವ ಪರಿಯಿನ್ನೆಂತೊ ? ಇದು ಕಾರಣ- ಕೂಡಲಚೆನ್ನಸಂಗಯ್ಯನಲ್ಲಿ ಮುಕ್ತಿಯನರಸುವಡೆ ಅಂಗನಲ್ಲಿ ಹೆರೆಹಿಂಗದೆ ಲಿಂಗವ ಧರಿಸಬೇಕು