ಒಲವಿಲ್ಲದ ಪೂಜೆ ನೇಹವಿಲ್ಲದ ಮಾಟ: ಆ ಪೂಜೆಯು ಆ ಮಾಟವು ಚಿತ್ರದ ರೂಹು ಕಾಣಿರಣ್ಣಾ ಚಿತ್ರದ ಕಬ್ಬು ಕಾಣಿರಣ್ಣಾ ಅಪ್ಪಿದಡೆ ಸುಖವಿಲ್ಲ ಮೆಲಿದಡೆ ರುಚಿುಲ್ಲ. ಕೂಡಲಸಂಗಮದೇವಾ ನಿಜವಿಲ್ಲದವನ ಭಕ್ತಿ. 126