ಓಡುವಾತ ಲೆಂಕನಲ್ಲ ಬೇಡುವಾತ ಭಕ್ತನಲ್ಲ. ಓಡಲಾಗದು ಲೆಂಕನು ಬೇಡಲಾಗದು ಭಕ್ತನು. ಓಡೆನಯ್ಯಾ ಬೇಡೆನಯ್ಯಾ ಕೂಡಲಸಂಗಮದೇವಾ. 442