ವಿಷಯಕ್ಕೆ ಹೋಗು

ಓದನಾದರಿಸಿ, ಗಿಳಿಯ ತಂದು

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಓದನಾದರಿಸಿ
ಗಿಳಿಯ ತಂದು ಸಲಹಿ ಓದಿಸಿದಳಯ್ಯಾ; ಆಲದ ಮರದ ಗಿಳಿ ಓಜೆಗೊಂಡಿತ್ತಯ್ಯಾ ! ಗಿಳಿ ಓದಿತ್ತು
ತನ್ನ ಪರಬ್ರಹ್ಮವ ಬೇಡಿತ್ತು; ತನ್ನ ಪೂರ್ವಾಶ್ರಯದ ಕೊರೆಯ ಕೂಳನುಂಡ ಗಿಳಿ
ಮರೆಯಿತ್ತು ತನ್ನ ತಾನು ! ಅರಿವೆಂಬ ಜ್ಞಾನ ಹುಟ್ಟಿತ್ತಯ್ಯಾ ; ಅರಿವೆಂಬ ಜ್ಞಾನ ಹುಟ್ಟಲಿಕೆ ಜಂಪಿನ ಕಡ್ಡಿಯ ಮೇಲೆ ಕುಳಿತಿರ್ದಿತ್ತಯ್ಯಾ ! ಜಂಪಿನ ಕಡ್ಡಿಯ ಮೇಲೆ ಕುಳಿತ ಗಿಳಿ
ಜಂಪಳಿಸುತ್ತಿರ್ದಿತ್ತು ತನ್ನ ತಾನು. `ಅಕ್ಕಟಾ ಅಕ್ಕಟಾ' ಎಂದು
ತನ್ನ ಪೂರ್ವಾಶ್ರಯದ ಅಕ್ಕನೆಂಬಾ ಅಕ್ಕನ ಕರೆಯಿತ್ತು. ಚಕ್ಕನೆ ಲಿಂಗವೆಂಬ ಗೊಂಚಲ ಹಿಡಿಯಲು ಮಿಕ್ಕು ಪಲ್ಲವಿಸಿತ್ತು
ಕೂಡಲಚೆನ್ನಸಂಗಯ್ಯನಲ್ಲಿ ಪ್ರಭುವೆಂಬ ಲಿಂಗವು.