ಕಂಗಳೊಳಗಣ ಕಟ್ಟಿಗೆಯ ಮುರಿಯದ,

ವಿಕಿಸೋರ್ಸ್ದಿಂದ



Pages   (key to Page Status)   


ಕಂಗಳೊಳಗಣ ಕಟ್ಟಿಗೆಯ ಮುರಿಯದ
ಕೈಯೊಳಗಣ ಕಪ್ಪರವನೊಡೆಯದ
ತನ್ನೊಳಗಿಪ್ಪ ನಿಕ್ಷೇಪವ ಭೇದಿಸಿ ಕಾಣಲರಿಯದ ಬಿನುಗರೆಲ್ಲ
ಹಲುಗಿರಿವುತ್ತಿಹರು ಕಾಣಾ ಗುಹೇಶ್ವರಾ