ಕರಸ್ಥಲದ ಲಿಂಗವೆ ಕಾಯಕ್ಕೆ ವೇಧಿಸಿದಲ್ಲಿ
ಕಾಯ ಲಿಂಗವಾಯಿತ್ತು. ಅಂತಾದ ಮಹಾಘನಲಿಂಗವೆ ಪ್ರಾಣಕ್ಕೆ ವೇಧಿಸಿದಲ್ಲಿ ಪ್ರಾಣ ಲಿಂಗವಾಯಿತ್ತು
ಅಂತಾದ ಮಹಾಘನಲಿಂಗವೆ ಭಾವಕ್ಕೆ ವೇಧಿಸಿದಲ್ಲಿ ಭಾವ ಲಿಂಗವಾಯಿತ್ತು. ಅಂತಾದ ಮಹಾಘನಲಿಂಗವೆ ಜ್ಞಾನಕ್ಕೆ ವೇಧಿಸಿದಲ್ಲಿ ಜ್ಞಾನ ಲಿಂಗವಾಯಿತ್ತು. ಅಂತಾದ ಕಾರಣ_ನಮ್ಮ ಗುಹೇಶ್ವರನ ಶರಣಂಗೆ
ಅರಿವರತು ಕುರುಹು ನಿಷ್ಪತಿಯಾಗಿ
ತಾನೆಂಬ ಭಾವವು ಉರಿಯುಂಡ ಕರ್ಪುರದಂತಾಯಿತ್ತು