ಕಲ್ಪಿಸಿ ಅರ್ಪಿಸಲಿಲ್ಲ, ಭೋಗಿಸಲಿಲ್ಲ,

ವಿಕಿಸೋರ್ಸ್ದಿಂದ



Pages   (key to Page Status)   


ಕಲ್ಪಿಸಿ ಅರ್ಪಿಸಲಿಲ್ಲ
ಭೋಗಿಸಲಿಲ್ಲ
ಅರ್ಪಿತ ಅನರ್ಪಿತವೆಂಬೆರಡನಳಿದನಾಗಿ. ಕಾಯದ ಕೈಗಳ ಕೈಯೆ
ಭಾವದ ಕೈಗಳ ಕೈಯೆ ಅರ್ಪಿಸುವನಲ್ಲ ! ಆತ ಅರ್ಪಿತ ತಾನಾಗಿ. ಅರ್ಪಿತ ಅನರ್ಪಿತವೆಂಬ ಸಂದೇಹವಳಿದುಳಿದನು. ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣಂಗೆ ಪ್ರಸಾದವೆ ಪ್ರಳಯವಾಯಿತ್ತು !