ಕಾಮವೇಕೊ ಲಿಂಗಪ್ರೇಮಿಯೆನಿಸುವಂಗೆ ಕ್ರೋಧವೇಕೊ ಶರಣವೇದ್ಯನೆನಿಸುವಂಗೆ ಲೋಭವೇಕೊ ಭಕ್ತಿಯ ಲಾಭವ ಬಯಸುವಂಗೆ ಮೋಹವೇಕೊ ಪ್ರಸಾದವೇದ್ಯನೆನಿಸುವಂಗೆ ಮದಮತ್ಸರವುಳ್ಳವಂಗೆ ಹೃದಯಶುದ್ಧವೆಲ್ಲಿಯದೊ ಹದುಳಿಗರಾದಲ್ಲಿಪ್ಪ ಕೂಡಲಸಂಗಮದೇವ. 118