Pages(key to [[Help:Page Status{{!}}Page Status]])
ಅನಂತ ವರುಷದವರ ಹಿರಿಯರೆಂಬೆನೆ ? ಎನ್ನೆನು_ ಅವರು ಭೂಭಾರಕರಾಗಿ. ಏಳು ವರುಷದ ಹಿರಿಯ ಚೀಲಾಳ; ಹನ್ನೆರಡು ವರುಷದ ಹಿರಿಯಳು ಮಹಾದೇವಿಯಕ್ಕ. ಅಂಡಜ ಪಿಂಡಜ ಮೀನಜರೆಂಬವರೆಲ್ಲಾ ಅಂದಂದಿನ ಬಾಲಕರು. ನಿಮಗೆ ಬುದ್ಧಿಯ ಹೇಳುವಡೆ ಎನಗೆ ಬುದ್ಧಿಯಿಲ್ಲ ಕೂಡಲಚೆನ್ನಸಂಗಮದೇವಾ.