Pages(key to [[Help:Page Status{{!}}Page Status]])
ಅನಾದಿಯಲೊಬ್ಬ ಶರಣ; ಆಹ್ವಾನ ವಿಸರ್ಜನವಿಲ್ಲದ ಪರತತ್ವವ ಸ್ಥಾಪಿಸಿ ಪ್ರತಿಷ್ಠೆಯ ಮಾಡುವಲ್ಲಿ ಷಡುವರ್ಣಾತ್ಮಕ ಮೃಗಿ ಹುಟ್ಟಿದಳು ನೋಡಾ ! ಆ ಮೃಗಿಯೊಳು ಪಂಚಾಂಗ ಪಂಚತಂಡದವರೆಲ್ಲ ಹುಟ್ಟಿ ವರ್ತಿಸಿ ಲಯವಾಗಿ ಮತ್ತೆ ಪಲ್ಲವಿಸುತಿರ್ದರು ನೋಡಾ ! ಆ ಪರತತ್ವದ ಲೀಲೆಯನು ಆ ಶರಣನೆ ಬಲ್ಲ ಗುಹೇಶ್ವರಾ