ಅನುತಾಪದೊಡಲಿಂದೆ ಬಂದ ನೋವನುಂಬವರು ಒಡಲೊ ಪ್ರಾಣವೊ ಆರು ಹೇಳಾ ಎನ್ನೊಡಲಿಂಗೆ ನೀನು ಪ್ರಾಣವಾದ ಬಳಿಕ ಎನ್ನ ಒಡಲ ಸುಖ ದುಃಖವಾರ ತಾಗುವುದು ಹೇಳಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ ಎನ್ನ ನೊಂದ ನೋವು ಬೆಂದ ಬೇಗೆ ನಿಮ್ಮ ತಾಗದೆ ಹೋಹುದೆ ಅಯ್ಯಾ