ವಿಷಯಕ್ಕೆ ಹೋಗು

ಅಯ್ಯ ! ನೀಲಮಣಿ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ! ನೀಲಮಣಿ ಮಧ್ಯಸ್ಥಾನದಲ್ಲಿ
ಕಾರ ಮೇಘದೊಳಗಿನ ಮಿಂಚಿನ ಪ್ರಕಾಶವಾಗಿ ಚಿದಾಕಾಶಸ್ವರೂಪದಿಂದ ಪೀತವರ್ಣ ಮೊದಲಾಗಿ ಅನಂತ ವರ್ಣಸ್ವರೂಪವಾಗಿ ಅತ್ಯಂತವಾದ ಅಣುರೂಪವಾಗಿ ಬದನೆಯ ಮುಳ್ಳಿನ ಹಾಗೆ ಅನಂತ ಪ್ರಕಾರದಿಂದ ಕಾಣಲ್ಪಡುವುದು ನಿಜಶಿವಯೋಗಿಗೆ
ಲಿಂಗಧ್ಯಾನಿಗಳಿಗೆ ಅನಾದಿಮೂಲ ಪ್ರಣಮಸ್ವರೂಪದಿಂದ ಮುಖಕಮಲದ ಮೇಲೆ ಕಾಣಲ್ಪಡುವುದು ನೋಡಾ. ಅದೆಂತೆಂದಡೆ:ಮುಖ ಮಧ್ಯದಲ್ಲಿ ನೇತ್ರ
ನೇತ್ರ ಮಧ್ಯದಲ್ಲಿ ಮನಸ್ಸು
ಮನೋಮಧ್ಯದಲ್ಲಿ ತಾನೆ ತಾನಲ್ಲದೆ ಮತ್ತೊಂದು ಸಾಧಕವಿಲ್ಲದದು ನಿಜತಾರಕಬ್ರಹ್ಮಶಾಂಭವಮೂರ್ತಿಯ ನೋಡ_ ಇಂತು ನಿಜತಾರಕಬ್ರಹ್ಮಶಾಂಭವಮೂರ್ತಿಯ ಮೂರ್ತಿಗೊಂಡಿರ್ಪರು ನೋಡಾ ಗುಹೇಶ್ವರಲಿಂಗದ ಹೃತ್ಕಮಲಮಧ್ಯದಲ್ಲಿ ಸಿದ್ಧರಾಮಯ್ಯ.