ಗಗನದ ಮೇಘಂಗಳೆಲ್ಲ ಸುರಿದುವು ಭೂಮಿಯ ಮೇಲೆ. ಭೂಮಿ ದಣಿಯುಂಡು ಸಸಿಗಳೆಲ್ಲಾ ಬೆಳೆದವು. ಬಹುವಿಕಾರದಿಂದ ಬೆಳೆದ ಸಸಿ[ಯ] ವಿಕಾರದಿಂದ ಗ್ರಹಿಸುವ ಕಾಮವಿಕಾರಿಗಳು ಲಿಂಗವನೆತ್ತ ಬಲ್ಲರು ಗುಹೇಶ್ವರಾ.