ಗಿಡುವಿನ ಮೇಲಣ ತುಂಬಿ

ವಿಕಿಸೋರ್ಸ್ದಿಂದ



Pages   (key to Page Status)   


ಗಿಡುವಿನ ಮೇಲಣ ತುಂಬಿ ಕೂಡೆ ವಿಕಸಿತವಾಯಿತ್ತು
ತುಂಬಿ ನೋಡಾ ! ಆತುಮ ತುಂಬಿ ತುಂಬಿ ಪರಮಾತುಮ ತುಂಬಿ ತುಂಬಿ ನೋಡಾ! ಗುಹೇಶ್ವರನೆಂಬ ಲಿಂಗಕ್ಕೆ ಎರಗಿ ನಿಬ್ಬೆರಗಾಯಿತ್ತು ತುಂಬಿ ನೋಡಾ !