ಗಿಳಿಯೋದಿ ಫಲವೇನು ಬೆಕ್ಕು ಬಹುದ ಹೇಳಲರಿಯದು. ಜಗವೆಲ್ಲವ ಕಾಬ ಕಣ್ಣು ತನ್ನ ಕೊಂಬ ಕೊಲ್ಲೆಯ ಕಾಣಲರಿಯದು. ಇದಿರ ಗುಣವ ಬಲ್ಲೆವೆಂಬರು ತಮ್ಮ ಗುಣವನರಿಯರು ಕೂಡಲಸಂಗಮದೇವಾ. 123