ಗುಡಿಯೊಳಗಿರ್ದು ಗುಡಿಯ ನೇಣ ಕೊಯಿದಡೆ ಗುಡಿಯ ದಡಿಗೆ ಬಿದ್ದು ಹಲ್ಲು ಹೋಹುದು ನೋಡಾ ಪೊಡವಿಗೀಶ್ವರನ ಗರ್ಭಾವಾಸದೊಳಗಿರ್ದು ನುಡಿವರು ಮತ್ತೊಂದು ದೈವವುಂಟೆಂದು. ತುಡುಗುಣಿನಾಯನು ಪಿಡಿತಂದು ಸಾಕಿದಡೆ ತನ್ನೊಡೆಯಂಗೆ ಬಗಳುವಂತೆ ಕಾಣಾ ಕೂಡಲಸಂಗಮದೇವಾ.