ಗುರುವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ. ಲಿಂಗವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ. ಜಂಗಮವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ
ಪ್ರಸಾದವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ. ಇಂತೀ ಚತುರ್ವಿಧ ಸಂಪನ್ನ ಕೂಡಲಸಂಗಯ್ಯನಲ್ಲಿ ಚೆನ್ನಬಸವಣ್ಣನು.