ಗುರುವಿನೊಡನೆ ಲಿಂಗದೊಡನೆ ಸಹಭೋಜನ

ವಿಕಿಸೋರ್ಸ್ದಿಂದ



Pages   (key to Page Status)   


ಗುರುವಿನೊಡನೆ ಸಹಭೋಜನ ಮಾಡಬೇಕಾದಡೆ
ಚತುರ್ವಿಧಭಕ್ತಿಯಿಂದೆ ಗುರುವಿನೊಳಗೆ ತನುವಡಗಿರಬೇಕು. ಲಿಂಗದೊಡನೆ ಸಹಭೋಜನ ಮಾಡಬೇಕಾದಡೆ
ಸಂಕಲ್ಪ ವಿಕಲ್ಪ ಸೂತಕ ಪಾತಂಕಗಳಳಿದು ಲಿಂಗದೊಳಗೆ ಮನವಡಗಿರಬೇಕು. ಜಂಗಮದೊಡನೆ ಸಹಭೋಜನ ಮಾಡಬೇಕಾದಡೆ
ಮಜ್ಜನ ಭೋಜನ ಕುಸುಮ ಗಂಧಾನುಲೇಪನ ಅನ್ನ ವಸ್ತ್ರ ಮಣಿ ರತ್ನಾಭರಣ ಗೀತ ವಾದ್ಯ ನೃತ್ಯ ಹಾಸುಮಂಚ ಸ್ತ್ರೀಭೋಗ ಮೊದಲಾದ ಅನೇಕ ಭಕ್ತಿಯಿಂದೆ ಜಂಗಮಕ್ಕೆ ಧನವ ಸಮರ್ಪಿಸಬೇಕು. ಇಂತೀ ತ್ರಿವಿಧ ಭಕ್ತಿಯ ನಿರ್ಣಯವನರಿಯದೆ
ತನು ಮನ ಧನಂಗಳ ಹಿಂದಿಟ್ಟುಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ನೀತಿಹೀನರು ಸಹಭೋಜನ ಕವಳ ಪ್ರಸಾದವ ಕೊಟ್ಟು ಕೊಂಡಡೆ ಹುಳುವಿನ ಕೊಂಡದಲ್ಲಿ ಮುಳುಗಿಸಿಬಿಡುವನು ನೋಡಾ ನಮ್ಮ ಅಖಂಡೇಶ್ವರಾ.