ಗುರುಶಿಷ್ಯಸಂಬಂಧವನೇನೆಂದುಪಮಿಸುವೆ ? ಜ್ಯೋತಿಯಲೊದಗಿದ ಜ್ಯೋತಿಯಂತಿರಬೇಕು ದರ್ಪಣದೊಳಡಗಿದ ಪ್ರತಿಬಿಂಬದಂತಿರಬೇಕು ಸ್ಫಟಿಕದೊಳಗಿರಿಸಿದ ರತ್ನದಂತಿರಬೇಕು ರೂಪಿನ ನೆಳಲಿನ ಅಂತರಂಗದಂತಿರಬೇಕು. ಇದು ಕಾರಣ ಕೂಡಲಚೆನ್ನಸಂಗಯ್ಯಾ ದರ್ಪಣವ ದರ್ಪಣಕ್ಕೆ ತೋರಿದಂತಿರಬೇಕು