ಘನಚೈತನ್ಯಜಂಗಮದ ಕಾರಣಾಂಗವಾದಾತ ಗುರು ನಿಜಚೈತನ್ಯವನುಳ್ಳ ಜಂಗಮದ ಸೂಕ್ಷ್ಮಾಂಗವಾದಾತ ಗುರು ಸುಚೈತನ್ಯಜಂಗಮದ ಚರವಿಗ್ರಹವಾದಾತ ಗುರು ಭಕ್ತಾಚಾರವನುಳ್ಳ ಸ್ಥೂಲಾಂಗವಾದಾತ ಗುರು ಇಂತೀ ಘನಚೈತನ್ಯ ಜಂಗಮದ ಸ್ವರೂಪನಾದಾತ ಗುರು. ಅಂತಪ್ಪ ಜಂಗಮದ ಸಂಬಂಧವಾದ ಶ್ರೀಗುರುವಿಂಗೆ ನಮೋ ನಮೋ ಎಂಬೆನು ಕಾಣಾ ಗುಹೇಶ್ವರಯ್ಯಾ.