ಚಿದ್ಘನ ಚಿತ್ಪ್ರಕಾಶ ಚಿದಾನಂದ ಲಿಂಗವೆ ಎನ್ನ ಹೃದಯಕಮಲವ ಬೆಳಗುವ ಪರಂಜ್ಯೋತಿ ಲಿಂಗವೆ ಎನ್ನ ಕರಸ್ಥಲಕ್ಕನುವಾದ ಲಿಂಗವೆ ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಯಪ್ಪೆಯಯ್ಯಾ ಧರ್ಮಿ ಕೂಡಲಚೆನ್ನಸಂಗಮದೇವಾ