ತನು ಮನ ಧನವ ಹಿಂದಿಕ್ಕಿಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ. ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆ ಗುರಿಯ ತಾಗಬಲ್ಲುದೆ ಮಾಯಾಪಾಶ ಹಿಂಗಿ ಮನದ ಗಂಟು ಬಿಡದನ್ನಕ್ಕ ಕೂಡಲಸಂಗಮದೇವನೆಂತೊಲಿವನಯ್ಯಾ 202