ತನುವಿನ ಗುಣವ ವಿವರಿಸಿಹೆನೆಂದೆಡೆ ಮನ ಶುದ್ಧವಾಗಬೇಕು. ಮನದ ಗುಣವ ವಿವರಿಸಿಹೆನೆಂದೆಡೆ ಇಂದ್ರಿಯಂಗಳು ಶುದ್ಧವಾಗಬೇಕು. ತನು ಮನ ಇಂದ್ರಿಯಂಗಳು ಶುದ್ಧ ಸುಯಿಧಾನವಾಗಿ ಲಿಂಗಮುಖಕ್ಕೆ ವೇದ್ಯವಾದಲ್ಲದೆ ಗುಹೇಶ್ವರನ ಬೆರಸಬಾರದು ಕೇಳಾ ತಾಯೆ.