ತಾಯಿ ಬಂಜೆಯಾದಲ್ಲದೆ ಶಿಶು ಗತವಾಗದು. ಬೀಜ ನಷ್ಟವಾದಲ್ಲದೆ ಸಸಿ ಗತವಾಗದು. ನಾಮ ನಷ್ಟವಾದಲ್ಲದೆ ನೇಮ ನಷ್ಟವಾಗದು. ಮೊದಲು ಕೆಟ್ಟಲ್ಲದೆ ಲಾಭದಾಸೆ ಬಿಡದು. ಗುಹೇಶ್ವರನೆಂಬ ಲಿಂಗದ ನಿಜವನೆಯ್ದುವಡೆ ಪೂಜೆಯ ಫಲ ಮಾದಲ್ಲದೆ ಭವಂ ನಾಸ್ತಿಯಾಗದು.