ತಾಳಮಾನ ಸರಿಸವನರಿಯೆ, ಓಜೆ

ವಿಕಿಸೋರ್ಸ್ದಿಂದ



Pages   (key to Page Status)   

ತಾಳಮಾನ ಸರಿಸವನರಿಯೆ
ಓಜೆ ಬಜಾವಣೆಯ ಲೆಕ್ಕವನರಿಯೆ
ಅಮೃತಗಣ ದೇವಗಣವನರಿಯೆ
ಕೂಡಲಸಂಗಮದೇವಾ
ನಿನಗೆ ಕೇಡಿಲ್ಲವಾಗಿ ಆನು ಒಲಿದಂತೆ ಹಾಡುವೆ.