ತಾವು ಗುರುವೆಂದು ಮುಂದಣವರಿಗನುಗ್ರಹವ ಮಾಡುವರಯ್ಯಾ
ತಾವು ಗುರುವೆಂತಾದರೊ ! ಎಲ್ಲರಿಗೆಯೂ ಒಂದೇ ದೇಹ. ``ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ ಆತ್ಮಾಕಾಯಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಯಂ' ಎಂದುದಾಗಿ
ಗುರುವೆಂಬುದು ತಾನು ಪರುಷವು ಆ ಪರುಷವು ಮುಟ್ಟಲೊಡನೆ ಉಳಿದ ಲೋಹಂಗಳು ಸುವರ್ಣವಾದುವಲ್ಲದೆ
ಆ ಪರುಷವೆ ಆಗಲರಿಯವು_ ಅದು ಗುರುಸ್ಥಲವಲ್ಲ ನಿಲ್ಲು ಮಾಣು. ಗುರುವೆಂಬುದು ತಾನು ಸ್ವಯಂ ಜ್ಯೋತಿಪ್ರಕಾಶವು
ಅಂತಪ್ಪ ಸ್ವಯಂಜ್ಯೋತಿ ಪ್ರಕಾಶವ ತಂದು ಪರಂಜ್ಯೋತಿಯ ಹೊತ್ತಿಸಿದಡೆ
ಆ ಜ್ಯೋತಿ ತನ್ನಂತೆ ಮಾಡಿತ್ತು. ಅದಾವ ಜ್ಯೋತಿಯೆಂದಡೆ ಪಶ್ಚಿಮಜ್ಯೋತಿ. ಆ ಪಶ್ಚಿಮಜ್ಯೋತಿಯ ಬೆಳಗಿನಿಂದ ಪ್ರಾಣಲಿಂಗವ ಕಂಡು ಸುಖಿಯಾದೆನು. ನಾಲ್ಕು ವೇದಾರ್ಥ:ಅಜಪಗಾಯತ್ರಿ. ಅಜಪಗಾಯತ್ರಿಯರ್ಥ:ಪ್ರಾಣಾಯಾಮ. ಪ್ರಾಣಾಯಾಮದಿಂದ ಪ್ರಾಣಲಿಂಗ ಸಂಬಂಧವ ಮಾಡೂದು. ಇಷ್ಟರಲ್ಲಿ ತಾನು ಸ್ವತಂತ್ರನಾದಡೆ
ಇಷ್ಟಲಿಂಗವನಾರಿಗಾದರೂ ಕೊಡುವುದು. ಇಲ್ಲದಿದ್ದರೆ ಅಂಧಕನ ಕೈಯ ಹೆಳವ ಹಿಡಿದಂತೆ ಕಾಣಾ ಕೂಡಲಚೆನ್ನಸಂಗಮದೇವಯ್ಯಾ