ದಾಸೋಹವೆಂಬ ಸೋಹೆಗೊಂಡು ಹೋಗಿ ಗುರುವ ಕಂಡೆ ಲಿಂಗವ ಕಂಡೆ ಜಂಗಮವ ಕಂಡೆ ಪ್ರಸಾದವ ಕಂಡೆ. ಇಂತೀ ಚತುರ್ವಿಧಸಂಪನ್ನನಾದೆ ಕಾಣಾ ಕೂಡಲಸಂಗಮದೇವಾ.