ನಚ್ಚು ಮಚ್ಚಿನ ಶರಣರೆನ್ನ ಕಣ್ಣಮುಂದೆ ಬಂದು ನಿಂದಿರಲು ಎನ್ನ ತನುವ ಬಗಿದು ಎನ್ನ ತನುವಿನೊಳಗಿಂಬಿಟ್ಟುಕೊಂಬೆನು ಎನ್ನ ಮನವ ಬಗಿದು ಎನ್ನ ಮನದೊಳಗಿಂಬಿಟ್ಟುಕೊಂಬೆನು ಎನ್ನ ಕಂಗಳ ಬಗಿದು ಎನ್ನ ಕಂಗಳೊಳಗಿಂಬಿಟ್ಟುಕೊಂಬೆನು. ಕೂಡಲಸಂಗನ ಶರಣರೆನ್ನ ಒಡೆಯರಾಗಿ ಎನ್ನ ಭಾವಕ್ಕೆ ಬಂದ ಭಕ್ತಿಯ ಮಾಡುವೆನು.