ನಮ್ಮ ಶರಣ ಅಂತರಂಗದ

ವಿಕಿಸೋರ್ಸ್ದಿಂದ



Pages   (key to Page Status)   


ನಮ್ಮ ಶರಣ ಅಂತರಂಗದ ಅಷ್ಟವಿಧಾರ್ಚನೆಯ ಮಾಡಿ ಸುಜ್ಞಾನದೃಷ್ಟಿಯಿಂದ ನೋಡಲು ಆ ಜ್ಯೋತಿರ್ಲಿಂಗ ಒಂದೆರಡಾಯಿತ್ತು ಎರಡು ಮೂರಾಯಿತ್ತು; ಮೂರಾರಾಯಿತ್ತು; ಆರೊಂಬತ್ತಾಯಿತ್ತು
ಒಂಬತ್ತು ಹದಿನೆಂಟಾಯಿತ್ತು; ಹದಿನೆಂಟು ಮೂವತ್ತಾರಾಯಿತ್ತು; ಆ ಮೂವತ್ತಾರೆ ಇನ್ನೂರ ಹದಿನಾರಾಯಿತ್ತು. ಇನ್ನೂರ ಹದಿನಾರೆ ಸಾವಿರದೇಳನೂರಿಪ್ಪತ್ತೆಂಟಾಯಿತ್ತು. ಆ ಲಿಂಗಂಗಳೆ ಶರಣನ ರೋಮದ ಕುಳಿಯಲ್ಲಿ ನಿಂದು ಸರ್ವಾಂಗ ಲಿಂಗವಾಯಿತ್ತು. ಆ ಲಿಂಗ ಶರಣಂಗೆ ಚೈತನ್ಯವಾಯಿತ್ತು. ಆ ಶರಣನೆ ಲಿಂಗಕ್ಕೆ ಚೈತನ್ಯವಾಗಲು
ಶರಣಸತಿ ಲಿಂಗಪತಿಯೆಂಬೆರಡಳಿದು ಒಬ್ಬ ಶರಣನೆ ಉಳಿಯಲು ಆ ಶರಣನ ಪಾದೋದಕವೆ ಲಿಂಗಕ್ಕೆ ಅಭಿಷೇಕವಾಯಿತ್ತು. ಆ ಶರಣನ ಪಾದಕ್ಕರ್ಪಿಸಿದ ಕುಸುಮವೆ ಪ್ರಸಾದಪುಷ್ಫವಾಯಿತ್ತು. ಆ ಶರಣನ ಪಾದಕ್ಕರ್ಪಿಸಿದ ಗಂಧಾಕ್ಷತೆಯೆ
ತಾಂಬೂಲವೆ ಲಿಂಗಪ್ರಸಾದಗಳಾದವು. ಆ ಶರಣನ ಸನ್ನಿಧಿಯಲ್ಲಿ ಪ್ರಕಾಶವಾದ ಧೂಪದೀಪಂಗಳೆ ಲಿಂಗದ್ರವ್ಯಂಗಳಾಗಿ ಆ ಶರಣನ ಪಾದಪೂಜಾದ್ರವ್ಯವೆ ಲಿಂಗಪೂಜಾದ್ರವ್ಯವಾಗಿ ಆಚರಿಸುತಿರ್ದಲ್ಲಿ ಶರಣಸತಿ ಲಿಂಗಪತಿ ಎಂಬ ನ್ಯಾಯ ಒಂದಾಯಿತ್ತು. ಲಿಂಗ ಹಿರಿದು ಅಂಗ ಕಿರಿದು ಎಂಬ ನ್ಯಾಯ ಇಲ್ಲದೆ ಹೋಯಿತ್ತು_ ಅದೆಂತೆಂದಡೆ; ದೀಪದಿಂದ ದೀಪ ಹುಟ್ಟಿದಲ್ಲಿ
ಆವ ಆವ ದೀಪ ಮೊದಲೆಂಬುದು ಕಾಣದಂತೆ; ಸರ್ಪ ಕಚ್ಚಿದ ಮನುಷ್ಯನ ಅಂಗವಿಷ
ಒಂದರ ಠಾವಿನಲ್ಲಿದೆಯೆಂದು ಕುರುಹಿಡಬಾರದಂತೆ
ಲಿಂಗ ಪ್ರಾಣವಾದ ಶರಣಂಗೆ
ಶರಣ ಪ್ರಾಣವಾದ ಲಿಂಗಕ್ಕೆ ಭೇದವಿಲ್ಲ_ ಹರಗುರು ವಾಕ್ಯದಲ್ಲಿ ಶರಣ_ ಲಿಂಗಾದಾಚರಣೆ ಇಂತಿಹುದು. ಈ ಶರಣ_ ಲಿಂಗದೂಷಣೆಯ ಮಾಡುವ ದ್ರೋಹಿಗಳಿಗೆ ನಾಯಕನರಕ ತಪ್ಪದು
ಕೂಡಲಚೆನ್ನಸಂಗಮದೇವಾ