ನಿಮ್ಮ ತೇಜವ ನೋಡಲೆಂದು ಹೆರಸಾರಿ ನೋಡುತ್ತಿರಲು ಶತಕೋಟಿ ಸೂರ್ಯರು ಮೂಡಿದಂತೆ ಇರ್ದುದಯ್ಯಾ ! ಮಿಂಚಿನಬಳ್ಳಿಯ ಸಂಚವ ಕಂಡಡೆ ಎನಗಿದು ಸೋಜಿಗವಾಯಿತ್ತು ! ಗುಹೇಶ್ವರಾ ನೀನು ಜ್ಯೋತಿರ್ಲಿಂಗವಾದಡೆ ಉಪಮಿಸಿ ನೋಡಬಲ್ಲವರಿಲ್ಲಯ್ಯಾ.