ನಿರಾಳ ನಿಶ್ಶೂನ್ಯ ಪರಮಜಂಗಮದರಿವು

ವಿಕಿಸೋರ್ಸ್ದಿಂದ



Pages   (key to Page Status)   


ನಿರಾಳ ನಿಶ್ಶೂನ್ಯ ಪರಮಜಂಗಮದರಿವು ತಾನಾಗದೆ
ಬರಿದೆ ಅಹಂಕಾರದಿಂದ ಮೂರು ಮಲಂಗಳ ಸ್ವೀಕರಿಸುತ್ತ ನಾವೆ ಜಂಗಮವೆಂದು ನುಡಿವ ಕರ್ಮ ಪಾಷಂಡಿಗಳು_ ಕಾಶಿ ಕೇದಾರ ಶ್ರೀಶೈಲ ವಿರೂಪಾಕ್ಷನೆಂದು
ಮತ್ತೆ ಈರಣ್ಣ ಮಲ್ಲಣ್ಣ ಬಸವಣ್ಣ ಇವರೇ ದೇವರೆಂದು ಆ ಕಲ್ಲುಗಳ ತಮ್ಮ ಮನೆಯೊಳಗೊಂದು ಮೂಲೆ ಸಂದಿ ಗೊಂದಿ ಗೊತ್ತಿನೊಳಗಿಟ್ಟು ಅದರ ಬಳಿದ [ತೊಳೆದ] ನೀರು
ಅವರೆಂಜಲ ತಿಂಬುವ ಪಶುಗಳಿಗೆ ದೇವಭಕ್ತರೆನಬಹುದೇನಯ್ಯಾ ? ಎನಲಾಗದು. ಇಂತಪ್ಪ ಅನಾಚಾರಿ ಅಪಸ್ಮಾರಿ ಶ್ವಪಚರ ಜಂಗಮವೆಂದು ಪೂಜಿಸಲಾಗದು ಕಾಣಿರೊ. ವೀರಶೈವ ಆಚಾರವುಳ್ಳ ಭಕ್ತನು ಇದ ಮೀರಿ ಪೂಜಿಸಿದಡೆ ಅವರಿಬ್ಬರಿಗೆಯೂ ಭವಕರ್ಮಂಗಳು ತಪ್ಪವು ಕಾಣಾ ಗುಹೇಶ್ವರಾ