ನಿಷೆ*ಯಿಂದ ಲಿಂಗವ ಪೂಜಿಸಿ ಮತ್ತೊಂದು ಪಥವನರಿಯದ ಶರಣರು ಸರ್ಪನ ಹೆಡೆಯ ಮಾಣಿಕದಂತೆ ಇಪ್ಪರು ಭೂಷಣರಾಗಿ ! ದರ್ಪಣದೊಳಗಣ ಪ್ರತಿಬಿಂಬದಂತೆ ಹಿಂಗದಿಪ್ಪರು ಕೂಡಲಸಂಗಮದೇವಾ ನಿಮ್ಮ ಶರಣರು.