ನೂರನೋದಿ ನೂರ ಕೇಳಿ ಏನು ಆಸೆ ಬಿಡದು ರೋಷ ಪರಿಯದು. ಮಜ್ಜನಕ್ಕೆರೆದು ಫಲವೇನು ಮಾತಿನಂತೆ ಮನವಿಲ್ಲದ ಜಾತಿ [ಡಂ]ಬರ ನೋಡಿ ನಗುವ ನಮ್ಮ ಕೂಡಲಸಂಗಮದೇವ.