ನೆರೆ ನಂಬೋ ನೆರೆ ನಂಬೋ ಧರಧುರವಿಲ್ಲದೆ ಸಾಮವೇದಿಗಳಂತೆ ನೆರೆ ನಂಬೋ ನೆರೆ ನಂಬೋ ದಾಸ-ದುಗ್ಗಳೆಯಂತೆ ನೆರೆ ನಂಬೋ ನೆರೆ ನಂಬೋ ಸಿರಿಯಾಳ-ಚಂಗಳೆಯಂತೆ ನೆರೆ ನಂಬೋ ನೆರೆ ನಂಬೋ ಸಿಂಧು-ಬಲ್ಲಾಳನಂತೆ ನೆರೆ ನಂಬಿದೆಯಾದಡೆ ತನ್ನನೀವ ಕೂಡಲಸಂಗಮದೇವ. 149