ಪಂಚೇಂದ್ರಿಯಂಗಳ ಮುಖಂಗಳಲ್ಲಿ ಅಲ್ಲಲ್ಲಿ ತಾಗಿದ ಸುಖವ ಸುಖಿಸಿ ಲಿಂಗಾರ್ಪಿತವೆಂಬರು. ಅದು ಲಿಂಗಾರ್ಪಿತವೆ ? ಅಲ್ಲಲ್ಲ. ಅರ್ಪಿತವ ಮಾಡದೆ ಅನರ್ಪಿತವ ಹೊದ್ದದೆ ಅರ್ಪಿಸಬೇಕು. ಅರ್ಪಿಸುವ ಈ ಭೇದವುಳ್ಳನ್ನಕ್ಕ ಶರಣನೆನಿಸಬಾರದು. ಕೂಡಲಚೆನ್ನಸಂಗಯ್ಯಾ.