ಪರಿಯಾಣವೆ ಭಾಜನವೆಂಬರು; ಪರಿಯಾಣ ಭಾಜನವಲ್ಲ ಲಿಂಗಕ್ಕೆ ತನ್ನ ಮನವೆ ಭಾಜನ. ಪ್ರಾಣವನು ಬೀಸರವೋಗಲೀಯದೆ ಮೀಸಲಾಗರ್ಪಿಸಬಲ್ಲಡೆ ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ.