ಬಡಹಾರುವನೇಸು ಭಕ್ತನಾದಡೆಯೂ ನೇಣಿನ ಹಂಗ ಬಿಡ ! ಮಾಲೆಗಾರನೇಸು ಭಕ್ತನಾದಡೆಯೂ ಬಾವಿಯ ಬೊಮ್ಮನ ಹಂಗ ಬಿಡ ! ಬಣಜಿಗನೇಸು ಭಕ್ತನಾದಡೆಯೂ ಒಟ್ಟಿಲ ಬೆನಕನ ಹಂಗ ಬಿಡ ! ಕಂಚುಗಾರನೇಸು ಭಕ್ತನಾದಡೆಯೂ ಕಾಳಿಕಾದೇವಿಯ ಹಂಗ ಬಿಡ ! ನಾನಾ ಹಂಗಿನವನಲ್ಲ ನಿಮ್ಮ ಶರಣರ ಹಂಗಿನವನಯ್ಯಾ ಕೂಡಲಸಂಗಮದೇವಾ. 451